
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಅಕ್ಕಿ ಇದ್ದರೆ ಟೆಂಡರ್ ಮೂಲಕ ಖರೀದಿ ಮಾಡ್ತೇವೆ.ಜುಲೈ 1ರಿಂದ ಅಕ್ಕಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ , 1092 ಕೋಟಿ ರೂ. ಅಕ್ಕಿಗೆ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪುಕ್ಕಟೆಯಾಗಿ ಅಕ್ಕಿ ಕೊಡುವುದಿಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಉಂಟಾ..? ದುಡ್ಡು ಕೊಡ್ತೀವಿ ಅಂದ್ರೂ ಅಕ್ಕಿ ಕೊಡಲ್ಲ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

