HomeKarnatakaBIG NEWS : 'ಮಳೆಯಾಗದಿದ್ರೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಿಂತನೆ' : ಸಚಿವೆ...

BIG NEWS : ‘ಮಳೆಯಾಗದಿದ್ರೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಿಂತನೆ’ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಬಹಳ ದುರ್ಬಲವಾಗಿದ್ದು, ನೀರಿಗೆ ಹಾಹಾಕಾರ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ರೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಿನ 7 ದಿನ ರಾಜ್ಯದಲ್ಲಿ ಮಳೆ ಆಗುತ್ತದೆ ಎಂದು ವರದಿ ತಿಳಿಸಿದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ರೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದಿದ್ದಾರೆ.

ಹಲವು ಕಡೆ ನೀರಿನ ಸಮಸ್ಯೆ ತಲೆದೂರಿದ್ದು, ನೀರಿನ ಸಮಸ್ಯೆ ಬಗೆಹರಿಸಲು ಆಯಾ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ ಜನರು ಆತಂಕಪಡುವ ಅಗತ್ಯವಿಲ್ಲ. ಮಳೆಯಾಗದಿದ್ರೆ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ಮಾಡುತ್ತದೆ. ಆ ನಿಟ್ಟಿನಲ್ಲಿ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular