ಅಯೋಧ್ಯೆ: ತೀವ್ರ ತಾಪಮಾನಕ್ಕೆ ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.
40 ವರ್ಷದ ಟ್ರಾಫಿಕ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಭಾನುವಾರ ತೀವ್ರ ಶಾಖದಿಂದಾಗಿ ಕರ್ತವ್ಯದ ವೇಳೆ ಮೂರ್ಛೆ ಹೋದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿನೋದ್ ಸೋಂಕರ್ ಎಂಬುವವರು ಭಾನುವಾರ ಮಧ್ಯಾಹ್ನ ಅಯೋಧ್ಯೆಯ ಹನುಮಾನ್ ಗರ್ಹಿ ದೇವಾಲಯದ ಬಳಿ ಕರ್ತವ್ಯದಲ್ಲಿದ್ದರು. ಈ ವೇಳೆ ತೀವ್ರ ಶಾಖದಿಂದಾಗಿ ಸೋಂಕರ್ ಮೂರ್ಛೆ ಹೋಗಿದ್ದು, ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಸದ್ಯ, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ನಂತರ ಅವರ ಸಾವಿನ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.