HomeKarnatakaBIG NEWS: ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ನೋಡಿಕೊಳ್ಳಲಿ; ಆರ್. ಅಶೋಕ್ ಗೆ ತಿರುಗೇಟು...

BIG NEWS: ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ನೋಡಿಕೊಳ್ಳಲಿ; ಆರ್. ಅಶೋಕ್ ಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಂಸದ ಡಿ.ಕೆ. ಸುರೇಶ್ ರಾಜಕೀಯದ ಬಗ್ಗೆ ವ್ಯಂಗ್ಯವಾಡಿದ್ದ ಮಾಜಿ ಸಚಿವ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಆರ್. ಅಶೋಕ್ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.

ರಾಜಕೀಯದಿಂದ ದೂರ ಉಳಿಯುವ ಮಾತನಾಡಿದ್ದ ಡಿ.ಕೆ. ಸುರೇಶ್ ಹೇಳಿಕೆಗೆ ಮಾಜಿ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದರು. ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಸಿಗಲಿಲ್ಲ. ಮುಂದಿನ ದಿನಗಳಲ್ಲೂ ನಮ್ಮಣ್ಣ ಸಿಎಂ ಆಗಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಹಾಗಾಗಿ ಡಿ.ಕೆ. ಸುರೇಶ್ ರಾಜಕೀಯ ನಿವೃತ್ತಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಪ್ರಜ್ಞಾವಂತ, ಅನುಭವಿ ನಾಯಕ. ಡಿ.ಕೆ. ಸುರೇಶ್ ಗೆ ಯಾವುದೇ ವೈರಾಗ್ಯವೂ ಇಲ್ಲ. ಆರ್. ಅಶೋಕ್ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದೆ. ಮೊದಲು ಅದನ್ನು ನೋಡಿಕೊಳ್ಳಲಿ. ಮೊದಲು ಬಿಜೆಪಿಯವರು ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಿ ಎಂದು ಟಾಂಗ್ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular