ಶಿವಮೊಗ್ಗ: ರಾಜ್ಯ ಸರ್ಕಾರ ಗ್ಯಾರಂಟಿ ಪೂರೈಸಲು ಸಂಕಷ್ಟಕ್ಕೆ ಸಿಲುಕಿದೆ. ಇದರ ಬೆನ್ನಲ್ಲೇ ಈಗ 6ನೇ ಗ್ಯಾರಂಟಿ ಬಗ್ಗೆ ಚರ್ಚೆ ಶುರು ಮಾಡಿದೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಡಿ.ಕೆ. ಶಿವಕುಮಾರ್ ಅವರ ನೋವನ್ನು ಅರ್ಥ ಮಾಡಿಕೊಳ್ಳಬೇಕು. ಸಿಎಂ ಸ್ಥಾನಕ್ಕಾಗಿ ಹೋರಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಆದರೆ ಸಿಎಂ ಸ್ಥಾನದ ಬದಲು ಡಿಸಿಎಂ ಹುದ್ದೆ ಸಿಕ್ಕಿದೆ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. 5 ಗ್ಯಾರಂಟಿ ಪೂರೈಸಲು ಸರ್ಕಾರ ಸಂಕಷ್ಟಕ್ಕೆ ಸಿಲುಕಿರುವಾಗ 6ನೇ ಗ್ಯಾರಂಟಿಯ ಚರ್ಚೆ ಕೂಡ ಶುರುವಾಗಿದೆ ಎಂದರು.
ಅನ್ನಭಾಗ್ಯ ಯೋಜನೆಗೆ ಕೇಂದ್ರ ಹೆಚ್ಚುವರಿ ಅಕ್ಕಿ ನೀಡುತ್ತಿಲ್ಲ ಎಂದು ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಾಳೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.