ಸಿಎಂ ಬದಲಾವಣೆ ವಿಚಾರ; ಅನಗತ್ಯ ವಿವಾದ ಸೃಷ್ಟಿಸಿ ಸಮಯ ಹಾಳು ಮಾಡಲ್ಲ ಎಂದ ಕಾನೂನು ಸಚಿವ

ಗದಗ: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಗದಗದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ವರಿಷ್ಠರಿಗೆ ಬಿಟ್ಟದ್ದು. ಅನಗತ್ಯವಾಗಿ ವಿವಾದ ಸೃಷ್ಟಿಸಿ ಸಮಯ ಹಾಳು ಮಾಡಲ್ಲ ಎಂದು ಹೇಳಿದರು.

ಇನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ಎಂಬ ವಿಚಾರ ಕೇವಲ ವದಂತಿ. ಇದೆಲ್ಲ ಸುಳ್ಳು. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಸೃಷ್ಟಿಸುತ್ತಿದ್ದಾರೆ. ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಯತ್ನಿಸುತ್ತಿದ್ದಾರೆ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read