alex Certify BIG NEWS : ಗ್ರಾಮ ಪಂಚಾಯಿತಿ ಸದಸ್ಯರನ್ನು `ಅತಿಥಿ ಶಿಕ್ಷಕ’ ರಾಗಿ ನೇಮಕ ಮಾಡಿಕೊಳ್ಳುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಗ್ರಾಮ ಪಂಚಾಯಿತಿ ಸದಸ್ಯರನ್ನು `ಅತಿಥಿ ಶಿಕ್ಷಕ’ ರಾಗಿ ನೇಮಕ ಮಾಡಿಕೊಳ್ಳುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ(Primary School),ಪ್ರೌಢಶಾಲೆ (High School)ಗಳಲ್ಲಿ ಅತಿಥಿ ಶಿಕ್ಷಕರ (Guest Teacher) ನೇಮಕಾತಿ ಸಂಬಂದ ಶಾಲಾ ಶಿಕ್ಷಣ ಇಲಾಖೆ (Department of School Education) ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಗ್ರಾಮ ಪಂಚಾಯತ್ ಸದಸ್ಯರು (Gram Panchayat Members) ಮತ್ತು ಚುನಾಯಿತ ಸದಸ್ಯರ(Elected Members) ನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳದಂತೆ ಆದೇಶ ಹೊರಡಿಸಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ದೊಡ್ಡರಾಂಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಸ್ತುತ ಗ್ರಾಮ ಪಂಚಾಯ್ತಿ ಸದಸ್ಯರಾಗಿರುವ ಎಸ್. ಎಂ. ರಜನಿ ಇವರನ್ನು ಅತಿಥಿ ಶಿಕ್ಷಕರನ್ನಾಗಿ ನೇಮಕ ಮಾಡಿಕೊಳ್ಳುವ ಕುರಿತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚಿಕ್ಕನಾಯಕನಹಳ್ಳಿ, ತಾಲ್ಲೂಕು ಇವರು ಸ್ಪಷ್ಟಿಕರಣ ನೀಡಲು ಕೋರಲಾಗಿದೆ.

2023-24 ನೇ ಸಾಲಿನಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ನೀಡಲಾದ ಷರತ್ತುಗಳಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾಗಿರುವ ಮತ್ತು ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳಲು ಯಾವುದೇ ಷರತ್ತು ಇಲ್ಲವೆಂಬುದಾಗಿ ಉಲ್ಲೇಖಿಸಿರುವುದನ್ನು ಪರಿಶೀಲಿಸಲಾಗಿದೆ.1993 ಕರ್ನಾಟಕ ಆಕ್ಟ್ 14] ಪಂಚಾಯತ್ ರಾಜ್ 12 (ಜಿ) ಪ್ರಕಾರ ರಾಜ್ಯ ಸರ್ಕಾರದ ಅಥವಾ ಯಾವುದೇ ಇತರ ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಟ್ಟಿರುವ ಯಾವುದೇ ಸ್ಥಳೀಯ ಅಥವಾ ಯಾವುದೇ ಇತರ ಪ್ರಾಧಿಕಾರದಲ್ಲಿ ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿದ್ದರೆ ಸದಸ್ಯರಾಗಲು ಅರ್ನಹರಾಗುತ್ತಾರೆ ಎಂಬುದಾಗಿ ಸ್ಪಷ್ಟಪಡಿಸಲಾಗಿದೆ.

ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವ ಸಂಬಂಧ ನೀಡಲಾದ ಷರತ್ತುಗಳನ್ನು ಪಾಲಿಸಿ ಮಾತ್ರ ನೇಮಕ ಮಾಡಿಕೊಳ್ಳಲು ತಿಳಿಸಿದ. ತಪ್ಪಿದಲ್ಲಿ ಷರತ್ತುಗಳನ್ನು ಪಾಲಿಸದ ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರ ಸಹಿತ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕರ ಮೇಲೆ ಚಾಲ್ತಿ ನಿಯಮಗಳಂತೆ ಕ್ರಮಕೈಗೊಳ್ಳದ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದೆಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...