HomeKarnatakaಸ್ಪಷ್ಟ ಬಹುಮತವಿದ್ರೂ ಅಡ್ಡ ಮತದಾನ ಭೀತಿಯಲ್ಲಿ ಬಿಜೆಪಿ: ನಾಳೆ ಹುಬ್ಬಳ್ಳಿ –ಧಾರವಾಡ ಮೇಯರ್ ಚುನಾವಣೆ

ಸ್ಪಷ್ಟ ಬಹುಮತವಿದ್ರೂ ಅಡ್ಡ ಮತದಾನ ಭೀತಿಯಲ್ಲಿ ಬಿಜೆಪಿ: ನಾಳೆ ಹುಬ್ಬಳ್ಳಿ –ಧಾರವಾಡ ಮೇಯರ್ ಚುನಾವಣೆ

ಹುಬ್ಬಳ್ಳಿ -ಧಾರವಾಡ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ನಾಳೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.

ನಾಳೆ ಬೆಳಗ್ಗೆ 9 ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ 1 ಗಂಟೆಗೆ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಅಡ್ಡ ಮತದಾನದ ಭೀತಿ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದ ಸದಸ್ಯರನ್ನು ದಾಂಡೇಲಿ ರೆಸಾರ್ಟ್ ನಲ್ಲಿ ಇಟ್ಟಿರುವ ಬಿಜೆಪಿ ರೆಸಾರ್ಟ್ ನಿಂದಲೇ ನೇರವಾಗಿ ಸದಸ್ಯರನ್ನು ಮತದಾನಕ್ಕೆ ಕರೆತರಲಿದೆ. ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. 39 ಸದಸ್ಯ ಬಲ ಹೊಂದಿರುವ ಬಿಜೆಪಿ, 33 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಅಧಿಕಾರ ಹಿಡಿಯಲು ಕಾರ್ಯತಂತ್ರ ರೂಪಿಸಿವೆ. ಇದೇ ಮೊದಲ ಬಾರಿಗೆ ಧಾರವಾಡ ಪಾಲಿಕೆ ಕಚೇರಿಯಲ್ಲಿ ಮೇಯರ್ ಚುನಾವಣೆ ನಿಗದಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular