alex Certify ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಾತಿ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.

ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. 2022-23ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಗೆ(ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ದಿನಾಂಕ:15.06.2022 ರಿಂದ ಪ್ರಾರಂಭಿಸಿ, ದಿನಾಂಕ:15,07,2022 ರವರೆಗೆ ಮುಕ್ತಾಯಗೊಳಿಸಲು ಸೂಚನೆ ನೀಡಲಾಗಿದೆ.

ಆದರಂತೆ, ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ರವರು 2023- 24ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಆನ್ಲೈನ್ನಲ್ಲಿ ಆಹ್ವಾನಿಸಿ, ಜಿಲ್ಲಾಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ನಿಯಮಾನುಸಾರ ಸೀಟುಗಳ ಭರ್ತಿ ಮಾಡಲು ಈ ಕೆಳಕಂಡ ವೇಳಾಪಟ್ಟಿಯಂತೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...