HomeKarnatakaBIG NEWS: ರಾಜ್ಯದಲ್ಲಿ ಜೋರಾಯ್ತು ಅಕ್ಕಿ ರಾಜಕೀಯ; ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯಿಂದ ಧರಣಿ

BIG NEWS: ರಾಜ್ಯದಲ್ಲಿ ಜೋರಾಯ್ತು ಅಕ್ಕಿ ರಾಜಕೀಯ; ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯಿಂದ ಧರಣಿ

ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ವಿಚಾರವಗಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಹೋರಾಟ ಆರಂಭವಾಗಿದೆ. ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದರೆ, ವಿಪಕ್ಷ ಬಿಜೆಪಿ ಕಾಂಗ್ರೆಸ್ ಗೆ ಪ್ರತಿಯಾಗಿ ಧರಣಿ ಆರಂಭಿಸಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಆನಂದ್ ರಾವ್ ವೃತ್ತ ಹಾಗೂ ಮೌರ್ಯ ಸರ್ಕಲ್ ಬಳಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದು, ಪ್ರತಿಭಟನೆಯಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಮಾತ್ರವಲ್ಲ, ಮಂಗಳೂರು, ಕಲಬುರ್ಗಿ, ಬೆಳಗಾವಿ, ಮೈಸೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ ಆರಂಭವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular