alex Certify Rain in Bengaluru : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain in Bengaluru : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

ಬೆಂಗಳೂರು : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಬೆಳಗ್ಗೆಯೇ ವಾಹನ ಸವಾರರು ಪರದಾಡಿದರು.

ಮೆಜೆಸ್ಟಿಕ್, ಶಾಂತಿನಗರ, ವಿಜಯನಗರ, ಕೆ ಆರ್ ಮಾರ್ಕೆಟ್, ವಿಜಯನಗರ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್. ಹೆಬ್ಬಾಳ, ಯಲಹಂಕ, ಕಾರ್ಪೊರೇಷನ್ ಸರ್ಕಲ್, ಸೇರಿ ಬೆಂಗಳೂರು ನಗರದ ಹಲವು ಕಡೆ ಧಾರಾಕಾರ ಮಳೆಯಾಗಿದೆ. ಮಳೆ ಹಿನ್ನೆಲೆ ವಾಹನ ಸವಾರರು, ವ್ಯಾಪಾರಿಗಳು, ವಿದ್ಯಾರ್ಥಿಗಳು ಪರದಾಡಿದರು.ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯಿದೆ. ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, , ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...