ಕಲಬುರ್ಗಿ: ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ತರಾತುರಿಯಲ್ಲಿ ಎನ್ ಇ ಪಿ-ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿತ್ತು. ಎನ್ ಇ ಪಿ ಬದಲಾಯಿಸಿ, ಎಸ್ ಇ ಪಿ-ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದರು.
ಕಳೆದ ಹತ್ತು ವರ್ಷಗಳಿಂದ ಉನ್ನತ ಶಿಕ್ಷಣ ಇಲಾಖೆ ಅನುದಾನ ಹೆಚ್ಚಾಗಿಲ್ಲ. ಬಹುತೇಕ ಅನುದಾನ ಸಂಬಳಕ್ಕೆ ಹೋಗುತ್ತದೆ. ಕಾನೂನು ವ್ಯಾಪ್ತಿಯಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತೇವೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿದ್ದ ಪಠ್ಯವನ್ನೇ ಬೋಧಿಸುವಂತೆ ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಆದೇಶಿಸಿದೆ.ಈ ಬೆನ್ನಲ್ಲೇ ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.