ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಹಾಗೂ ಸಂಸದ ಪ್ರತಾಪ್ ಸಿಂಹ ಟಾಕ್ ವಾರ್ ಮುಂದುವರೆದಿದ್ದು, ಪ್ರತಾಪ್ ಸಿಂಹ ವಿರುದ್ಧ ಸಚಿವರು ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಪ್ರತಾಪ್ ಸಿಂಹ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಟೀಕೆ ಮಾಡಿದರೆ ಒಕ್ಕಲಿಗರಿಗೆ ಟೀಕೆ ಮಾಡಿದಂತಲ್ಲ, ಈ ರೀತಿ ಹೇಳುವುದು ಸರಿಯಲ್ಲ. ನಾನು ಅಪ್ಪಿತಪ್ಪಿಯೂ ಬ್ರಾಹ್ಮಣ ಸಮುದಾಯವನ್ನು ಬೈದಿಲ್ಲ. 90% ಬ್ರಾಹ್ಮಣ ಸಮುದಾಯದವರು ನನ್ನನ್ನು ಬೆಂಬಲಿಸಿ ವೋಟ್ ಹಾಕಿದ್ದಾರೆ. ಬಿಎಲ್ ಡಿ ಸಂಸ್ಥೆಯ ರಿಜಿಸ್ಟ್ರಾರ್ ರಾಘವೇಂದ್ರ ಕುಲ್ಕರ್ಣಿ ಬ್ರಾಹ್ಮಣರು. ಸಂಸದ ಪ್ರತಾಪ್ ಸಿಂಹ ವಿಜಯಪುರಕ್ಕೆ ಭೇಟಿ ನೀಡಿ ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.
ನಮ್ಮ ಸಂಸ್ಥೆಯ ಶಿಕ್ಷಕರೂ ಬ್ರಾಹ್ಮಣರೆ. ಬ್ರಾಹ್ಮಣ ಸಮುದಾಯಕ್ಕೆ ನಾನೆಂದೂ ಬೈದಿಲ್ಲ. ಇಂತಹ ಮಾನಸಿಕ ಸ್ಥಿತಿಯನ್ನು ಪ್ರತಾಪ್ ಸಿಂಹ ಎಲ್ಲಿಂದ ಕಲಿತರೋ? ಎಲ್ಲಾ ಜಾತಿಯ ಜನರನ್ನು ಒಟ್ಟಾಗಿ ಕೊಂಡೊಯ್ಯುವ ಹಿನ್ನೆಲೆ ನಮ್ದು. ಪ್ರತಾಪ್ ಸಿಂಹ ಸಂಸದ ಸ್ಥಾನ ಇನ್ನು 10 ತಿಂಗಳು ಮಾತ್ರ ಇದೆ. ದಿನವೆಲ್ಲ ಪ್ರತಾಪ್ ಸಿಂಹಗೆ ಉತ್ತರ ಕೊಡುತ್ತಾ ಇರಲು ಆಗಲ್ಲ. ಪ್ರತಾಪ್ ಸಿಂಹ ಮನಃಸ್ಥಿತಿ ಬಗ್ಗೆ ಪಾಪ ಅನಿಸುತ್ತೆ ಎಂದು ಲೇವಡಿ ಮಾಡಿದ್ದಾರೆ.
ಎಂ.ಬಿ. ಪಾಟೀಲ್ ಬಳಿ ಇರೋದು ಚಿಲ್ಲರೆ ಖಾತೆ ಎಂದು ಹೇಳಿದ್ದಾರೆ. ಬೃಹತ್ ಕೈಗಾರಿಕೆ ಚಿಲ್ಲರೆ ಖಾತೆಯೆ ಎಂಬುದನ್ನು ಪ್ರಧಾನಿ ಬಳಿ ಕೆಳಿ ಎಂದು ಖಡಕ್ ಉತ್ತರ ನೀಡಿದ್ದಾರೆ.