HomeKarnatakaJOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜೂ. 23 ರಂದು ಕಲಬುರಗಿಯಲ್ಲಿ 'ಉದ್ಯೋಗ...

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜೂ. 23 ರಂದು ಕಲಬುರಗಿಯಲ್ಲಿ ‘ಉದ್ಯೋಗ ಮೇಳ’

ಕಲಬುರಗಿ : ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜೂನ್ 23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಎಮ್.ಪಿ. ಗಾರ್ಡಿಂಗ್ ಸೊಲ್ಯೂಷನ್ ಪ್ರೈ.ಲೀ. ದಲ್ಲಿ ಟೆಕ್ನಿಷಿಯನ್ ಹುದ್ದೆಗೆ ಐಟಿಐ / ಡಿಪ್ಲೋಮಾ (ಇ ಆಂಡ್ ಇ, ಇ ಆಂಡ್ ಸಿ) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ವಾಲ್ವಾಯ್ಲ್ ಫ್ಲೂಯ್ಡ್ ಪವರ್ಇಂಡಿಯಾ ಪ್ರೈ.ಲಿ. ದಲ್ಲಿ ಟ್ರೈನಿ ಹುದ್ದೆಗೆ ಐಟಿಐ / ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ನೀಡ್ಸ್ ಮ್ಯಾನ್ ಪವರ್ ಸಪೋರ್ಟ್ ಸರ್ವಿಸಸ್ ಪ್ರೈ.ಲಿ.ದಲ್ಲಿ ಟೆಕ್ನಿಷಿಯನ್ ಹುದ್ದೆಗೆ ಐಟಿಐ / ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್(ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲ್ಲಿ ಭಾಗವಹಿಸಬಹುದಾಗಿದೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, 9620095270 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular