HomeKarnatakaBIG NEWS: ಸಚಿವ ಸತೀಶ್ ಜಾರಕಿಹೊಳಿ ಸರ್ವರ್ ಹ್ಯಾಕ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು...

BIG NEWS: ಸಚಿವ ಸತೀಶ್ ಜಾರಕಿಹೊಳಿ ಸರ್ವರ್ ಹ್ಯಾಕ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: ಸರ್ವರ್ ಡೌನ್ ಆಗಲು ಕೇಂದ್ರ ಸರ್ಕಾರ ರಾಜ್ಯದ ಸಿಸ್ಟಮ್ ಹ್ಯಾಕ್ ಮಾಡಿದ್ದೇ ಕಾರಣ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಡಿ.ಕೆ .ಶಿವಕುಮಾರ್ ಜಾಣತನದ ಉತ್ತರ ನೀಡಿ ಜಾರಿಕೊಂಡಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಾನು ಟೆಕ್ನಿಕಲ್ ಮನುಷ್ಯನಲ್ಲ, ಸಂಬಂಧಪಟ್ಟ ಇಲಾಖೆಯನ್ನು ಕೇಳಿ. ನಾನು ಹಳ್ಳಿಯಿಂದ ವಿಧಾನಸೌಧಕ್ಕೆ ಬಂದವನು…….. ಏನಾಗಿದೆ ಎಂಬುದನ್ನು ತಿಳಿದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ದೆಹಲಿ ಪ್ರವಾಸದ ಬಗ್ಗೆಯೂ ಸ್ಪಷ್ಟಪಡಿಸಿದ ಡಿ.ಕೆ. ಶಿವಕುಮಾರ್, ನಾಳೆ ಅಥವಾ ನಾಡಿದ್ದು ನಾನು ದೆಹಲಿಗೆ ಹೋಗುತ್ತಿಲ್ಲ. 2-3 ದಿನಗಳ ಬಳಿಕ ನಾನು ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular