HomeKarnatakaರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗಿದ್ದು, ಹಾಸನದಲ್ಲಿ ಮಳೆಯಿಂದ 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಗೃಹೋಪಯೋಗಿ ವಸ್ತುಗಳು ಸೇರಿದಂತೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಒಂದು ಸೆಂಟಿಮೀಟರ್ ನಷ್ಟು ಮಳೆಯಾಗಿದೆ. ಬುಧವಾರದಿಂದ ರಾಜ್ಯದ ಹಲವು ಕಡೆ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular