ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೂರೈಕೆ ಒಂದು ದಿನಕ್ಕೆ ಕಡಿತಗೊಳಿಸಲಾಗಿದೆ.
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕಳೆದ ಶೈಕ್ಷಣಿಕ ಸಾಲಿನಲ್ಲಿ ಬಿಸಿಯೂಟದ ಜೊತೆಗೆ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನು ಸದ್ಯ ಒಂದು ದಿನಕ್ಕೆ ಕಡಿತಗೊಳಿಸಲಾಗಿದೆ.
ಜುಲೈ 15 ರವರೆಗೆ ಮಾತ್ರ ಅನ್ವಯಿಸಿ ಈ ಆದೇಶ ಜಾರಿಗೊಳಿಸಲಾಗಿದೆ. ಮುಂದಿನ ತಿಂಗಳು ಹೊಸ ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಜುಲೈ 15 ರವರೆಗೆ ಮಾತ್ರ ಆದೇಶ ಅನ್ವಯವಾಗಲಿದೆ. ಸರ್ಕಾರದ ನಿರ್ದೇಶನದ ಮೇರೆಗೆ ಆದೇಶ ಹೊರಡಿಸಲಾಗಿದ್ದು, ಬಜೆಟ್ ನಲ್ಲಿ ಸರ್ಕಾರ ಮೊಟ್ಟೆ ನೀಡುವ ಯೋಜನೆ ಮುಂದುವರೆಸುವ ಘೋಷಣೆ ಮಾಡಿದರೆ ಹೊಸ ಆದೇಶ ಹೊರಡಿಸಲಾಗುವುದು ಎಂದು ಹೇಳಲಾಗಿದೆ.