ಮೇಲ್ಮನೆ ಸದಸ್ಯರಾಗಿ ಶೆಟ್ಟರ್ ಸೇರಿದಂತೆ ಮೂವರ ಆಯ್ಕೆ ಬಹುತೇಕ ಖಚಿತ; ಅಧಿಕೃತ ಘೋಷಣೆಯಷ್ಟೇ ಬಾಕಿ…!

ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್ಎಸ್ ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರು ಮಂಗಳವಾರದಂದು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರುವ ಕಾರಣ ಜಗದೀಶ್ ಶೆಟ್ಟರ್ ಸೇರಿದಂತೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಮೂವರೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಕಾಂಗ್ರೆಸ್ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಆ ಚುನಾವಣೆಯಲ್ಲಿ ಪರಾಭವಗೊಂಡರೂ ಸಹ ವಿಧಾನ ಪರಿಷತ್ ಗೆ ಅವಕಾಶ ಕಲ್ಪಿಸಿಕೊಡುವ ಮೂಲಕ ಕಾಂಗ್ರೆಸ್, ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read