ಮೈಸೂರು : ಅನಾರೋಗ್ಯದ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲವು ದಿನಗಳಿಂದ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ನಿನ್ನೆ ರಾತ್ರಿ 11.30 ರ ವೇಳೆಗೆ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದು, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದ ಬಳಿಕ ನಂತರ 11.30 ಕ್ಕೆ ದೆಹಲಿಗೆ ಪಯಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿಗಳು ಬೆಳಗ್ಗೆ 9.50 ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಈಗ 11.30 ಗೆ ಹೆಚ್ ಎ ಎಲ್ ನಿಂದ ವಿಶೇಷ ವಿಮಾನ ಮೂಲಕ ದೆಹಲಿ ಗೆ ತೆರಳಲಿದ್ದಾರೆ.ಇಂದು ದೆಹಲಿಗೆ ತೆರಳಲಿರುವ ಸಿಎಂ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಗ್ಯಾರಂಟಿ ಯೋಜನೆ ಈಡೇರಿಕೆ ಕುರಿತು ಚರ್ಚೆ ನಡೆಸಲಿದ್ದಾರೆ
You Might Also Like
TAGGED:cm siddramiah