ಬೆಂಗಳೂರು : ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ (Siddaramaiah’s wife Parvathi) ಅವರ ಆರೋಗ್ಯ (Health) ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು (Manipal Hospital Doctor) ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಣಿಪಾಲ್ ಆಸ್ಪತ್ರೆ ವೈದ್ಯರು, ಅನಾರೋಗ್ಯದ ಹಿನ್ನೆಲೆಯಲ್ಲಿ ತಡರಾತ್ರಿ ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಸದ್ಯ ಅವರು ಎಂಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ವಾರ್ಡ್ ಗೆ ಶಿಫ್ಟ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ನಿನ್ನೆ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.