HomeKarnatakaGOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ತಗ್ಗಲಿದೆ ಮಕ್ಕಳ ಬ್ಯಾಗ್...

GOOD NEWS : ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ತಗ್ಗಲಿದೆ ಮಕ್ಕಳ ಬ್ಯಾಗ್ ಹೊರೆ

ಬೆಂಗಳೂರು   : ರಾಜ್ಯದ ಶಾಲಾ ವಿದ್ಯಾರ್ಥಿಗಳ ಬ್ಯಾಗ್ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. 1-10 ನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಹಿನ್ನೆಲೆ ಆಯಾ ತರಗತಿಗೆ ಬ್ಯಾಗ್ ತೂಕದ ಮಿತಿಯನ್ನು ನಿಗದಿ ಮಾಡಿ ಮಹತ್ವದ ಕ್ರಮ ಕೈಗೊಂಡಿದೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಸೂಚನೆ ಹೊರಡಿಸಿದ್ದು, ಪ್ರಾಥಮಿಕ ಮತ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೇ ಸಂತಸದಾಯಕವಾಗಿ ಕಲಿಸಿ ವಾತಾವರಣವನ್ನು ರೂಪಿಸುವ ಸಲುವಾಗಿ Centre for Child and Law, NLSI, Bengar i ರವರ ಸಹಯೋಗದೊಂದಿಗೆ ಡಿ.ಎಸ್.ಇ.ಆರ್.ಟಿ ರವರು ಒಂದು ಅಧ್ಯಯನ ನಡೆಸಿ ವರದಿಯನ ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ವರದಿಯಲ್ಲಿ ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡ 10 :7:1 15%ರಷ್ಟು ತೂಕದ ಶಾಲಾ ಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗಬಹುದಾಗಿ ಮೂಳೆ ತಜ್ಞರು ಶಿಫಾರಸ್ಸು ಮಾಡಿರುತ್ತಾರೆ
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಈ ಕೆಳಕಂಡ ಅಂಶಗಳಿಗೆ ಅನುಗುಣವಾಗಿ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

ಶಿಕ್ಷಣ ಇಲಾಖೆಯ ಮಹತ್ವದ ಕ್ರಮಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1) 1 ಮತ್ತು 2ನೇ ತರಗತಿ ಬೋಧನೆಯು ಬುನಾದಿ ಹಂತದ ಶಿಕ್ಷಣವಾಗಿದ್ದು ವಿದ್ಯಾರ್ಥಿಗಳು ಸಂತಸ ಮತ್ತು ಸಕ್ರಿಯವಾಗಿ ಶಾಲೆಗಳಲ್ಲಿಯೇ ಚಟುವಟಿಕೆ ಮೂಲಕ ಕಲಿಯಲು ಆದ್ಯತೆ ನೀಡುವುದು ಈ ವಿದ್ಯಾರ್ಥಿಗಳಿಗೆ ಕಲಿಕೆಯ ಪುನರ್ಬಲನಕ್ಕಾಗಿ ಯಾವುದೇ ರೀತಿಯ ಗೃಹಪಾಠ ಅಥವಾ ಮನೆಗೆಲಸವನ್ನು ನೀಡದಂತೆ ಕ್ರಮವಹಿಸುವುದು.

2) 1 ರಿಂದ 05ನೇ ತರಗತಿಗಳ ವಿದ್ಯಾರ್ಥಿಗಳಿಗೆ ಭಾಷೆ, ಗಣಿತ ಹಾಗೂ ಪರಿಸರ ವಿಜ್ಞಾನ ವಿಷಯಹೊರತುಪಡಿಸಿ ಇನ್ಯಾವುದೇ ಪಠ್ಯಕ್ರಮವನ್ನು ನಿಗದಿಪಡಿಸದಂತೆ ಕ್ರಮವಹಿಸುವುದು.

3) 3 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕಲಿಕಾ ಬಲವರ್ಧನೆ ಚಟುವಟಿಕೆ ಗಳನ್ನು ಶಾಲೆಗಳಲ್ಲಿಯೇ ನಿರ್ವಹಿಸುವುದು ಅತ್ಯಂತ ಅಗತ್ಯವಿರುವ ಹಾಗೂ ಪೂರಕವಾಗಿರುವಂತಹ ಚಟುವಟಿಕೆಗಳಿಗೆ ಸೀಮಿತ ಪ್ರಮಾಣದಲ್ಲಿ ಮನೆಗೆಲಸ ನೀಡುವಂತೆ ಕ್ರಮವಹಿಸುವುದು.

4) ವಿದ್ಯಾರ್ಥಿಗಳು ಕಲಿಕೆಯ ಎಲ್ಲಾ ಪಠ್ಯ ಪುಸ್ತಕಗಳು / ನೋಟ್ ಪುಸ್ತಕಗಳು ಮತ್ತು ಅಭ್ಯಾಸ ಪುಸ್ತಕಗಳನ್ನು ಪ್ರತಿ ದಿನವು ತರುವುದನ್ನು ತಪ್ಪಿಸಲು ವಿದ್ಯಾರ್ಥಿಗಳಿಗೆ ಮುಂಚಿತವಾಗಿಯೇ ಆಯಾ ದಿವಸದ ವೇಳಾಪಟ್ಟಿಗೆ ಅನುಗುಣವಾಗಿ ಅಗತ್ಯವಿರುವ ಪುಸ್ತಕಗಳನ್ನು ಮಾತ್ರ ಶಾಲೆಗೆ ತರಲು ಸೂಚನೆ ನೀಡುವುದು.

5) ಅಭ್ಯಾಸ ಚಟುವಟಿಕೆಗಳನ್ನು ಹಾಳೆಗಳಲ್ಲಿ ಮಾಡಿಸಿ ಫೈಲ್ ಮಾಡಿಸುವುದು. ಅವಶ್ಯಕತೆ ಇದ್ದಾಗ ಪರಾಮರ್ಶಿಸಲು ಇವುಗಳನ್ನು ಶಾಲೆಗಳಲ್ಲಿಯೇ ಸಂಗ್ರಹಿಸಿಡಲು ಪ್ರೇರೇಪಿಸುವುದು ಅಥವಾ ಅಭ್ಯಾಸ ಪುಸ್ತಕಗಳನ್ನು ಬಳಸಿದಲ್ಲಿ ಇವುಗಳನ್ನು ಶಾಲೆಗಳಲ್ಲಿಯೇ ಸಂಗ್ರಹಿಸಿಡತಕ್ಕದ್ದು.

6) ವಿದ್ಯಾರ್ಥಿಯು ಮನೆಯಿಂದ ಶಾಲೆಗೆ, ಶಾಲೆಯಿಂದ ಮನೆಗೆ ತೆಗೆದುಕೊಂಡು ಹೋಗುವ ಪಠ್ಯಪುಸ್ತಕಗಳು, ನೋಟ್ ಪುಸ್ತಕಗಳು, ಲೇಖನ ಸಾಮಗ್ರಿಗಳು, ಕಲಿಕಾ ಉಪಕರಣಗಳು ಹಾಗೂ
ಇನ್ನಿತರ ವಸ್ತುಗಳನ್ನು ತರಗತಿ ಒಳಗೆ ಶೇಖರಿಸಿಡುವಂತೆ ಅಗತ್ಯ ಅನುಕೂಲತೆಗಳನ್ನು ಕಲ್ಪಿಸತಕ್ಕದ್ದು,

7) ಶಾಲಾ ಗ್ರಂಥಾಲಯಗಳಲ್ಲಿ ಶಬ್ದಕೋಶ, ಸಮಾನಾರ್ಥಕ ಪದಕೋಶ, ಅಟ್ಲಾಸ್, ಜ್ಞಾನ ವಿಜ್ಞಾನ ಕೋಶಗಳಂತಹ ಪರಾಮರ್ಶನ ಸಾಮಗ್ರಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗುವಂತೆ ಹಾಗೂ ಮಕ್ಕಳು ಇವುಗಳನ್ನು ಅವಶ್ಯಕತೆ ಇದ್ದಾಗ ಬಳಸಿಕೊಳ್ಳುವಂತೆ ವ್ಯವಸ್ಥೆ ಮಾಡುವುದು.

8) 100 ರಿಂದ 200 ಪುಟ ಮೀರದ ನೋಟ್ ಪುಸ್ತಕಗಳನ್ನು ಬಳಸುವಂತೆ ಕ್ರಮವಹಿಸುವುದು,

9) ಕಡಿಮೆ ಖರ್ಚಿನ ಹಗುರವಾದ ಹಾಗೂ ದೀರ್ಘ ಕಾಲ ಬಾಳಿಕೆ ಬರುವಂತಹ ಶಾಲಾಬ್ಯಾಗ್ ಹಾಗೂ ಇತರೆ ಸಾಮಗ್ರಿಗಳನ್ನು ಬಳಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವುದು,

10) ಮಕ್ಕಳು ಶಾಲೆಗಳಿಗೆ ಕುಡಿಯುವ ನೀರನ್ನು ಕೊಂಡೊಯ್ಯುವುದನ್ನು ತಪ್ಪಿಸಲು ಕುಡಿಯುವ ನೀರಿನ ವ್ಯವಸ್ಥೆಯನ್ನು ಶಾಲೆಯಲ್ಲಿಯೇ ಕಲ್ಪಿಸತಕ್ಕದ್ದು. ಅತಿಯಾದ ಹೊರ ಇರುವ ಶಾಲಾಬ್ಯಾಗ್ನಿಂದ ಉಂಟಾಗಬಹುದಾದ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವುದು.

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular