HomeKarnatakaMonsoon Rain : ಜೂ. 25 ರಿಂದ ರಾಜ್ಯದಲ್ಲಿ 'ಮುಂಗಾರು' ಚುರುಕು : 15 ಜಿಲ್ಲೆಗಳಿಗೆ...

Monsoon Rain : ಜೂ. 25 ರಿಂದ ರಾಜ್ಯದಲ್ಲಿ ‘ಮುಂಗಾರು’ ಚುರುಕು : 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಕಡೆ ದುರ್ಬಲಗೊಂಡ ಮುಂಗಾರು ಜೂನ್ 25 ರಿಂದ ಚುರುಕಾಗಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, , , ಯಾದಗಿರಿ, ಚಿತ್ರದುರ್ಗ, ಹಾಸನ, ಕೊಪ್ಪಳ, ರಾಯಚೂರು, ಗದಗ, ಹಾವೇರಿ ವಿಜಯಪುರ ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕೆಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರುಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಇಂದು ಕೂಡ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಭಾರಿ ಮಳೆಯಾಗುವ ಸಾಕಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular