ಬೆಂಗಳೂರು : ಈಗಾಗಲೇ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರ ನಡುವೆ ಹೋಟೆಲ್ ತಿಂಡಿ, ಊಟ, ಕಾಫಿ ದರ ಕೂಡ ಹೆಚ್ಚಳವಾಗುವ ಸಾಧ್ಯತೆ ಇದೆ.
ಹೌದು, ಒಂದು ವಾರದಲ್ಲಿ ಬೆಂಗಳೂರಿನ ಹೋಟೆಲ್ ಗಳಲ್ಲಿ ಸದ್ದಿಲ್ಲದೇ ದರ ಏರಿಕೆಯಾಗಿದೆ. ಬೆಲೆ ಏರಿಸಲು ಹೋಟೆಲ್ ಮಾಲೀಕರ ಸಂಘ ಸೂಚನೆ ನೀಡದಿದ್ರೂ, ಕೆಲವು ಹೋಟೆಲ್ ಮಾಲೀಕರೇ ದರ ಹೆಚ್ಚಿಸಿದ್ದಾರೆ ಎನ್ನಲಾಗಿದೆ. ವಿದ್ಯುತ್ ಬೆಲೆ ಏರಿಕೆಯ ಹಿನ್ನೆಲೆ ಎಲ್ಲಾ ಹೋಟೆಲ್ ಗಳಲ್ಲಿ ಊಟ, ತಿಂಡಿ, ಕಾಫಿ ದರವನ್ನು ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ವಿದ್ಯುತ್ ದರ ಹೆಚ್ಚಳದ ಹಿನ್ನೆಲೆ ಅನಿವಾರ್ಯವಾಗಿ ಹೋಟೆಲ್ ತಿನಿಸುಗಳ ದರ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಅಡುಗೆ ಅನಿಲ ಹಾಗೂ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಈಗಾಗಲೇ ಹೋಟೆಲ್ ಊಟ ತಿಂಡಿ ದರ ಹೆಚ್ಚಳ ಮಾಡಲಾಗಿತ್ತು. ಅದೇ ರೀತಿ ವಾಣಿಜ್ಯ ಬಳಕೆಯ ಅಡುಗೆ ಅನಿಲ, ಹಾಲು, ತುಪ್ಪ, ಬೆಣ್ಣೆ ಹಾಗೂ ಇತರೆ ಆಹಾರ ಪದಾರ್ಥಗಳ ಬೆಲೆ ಕೂಡ ಹೆಚ್ಚಳವಾಗಿರುವ ಹಿನ್ನೆಲೆ ಹೋಟೆಲ್ ತಿನಿಸುಗಳ ದರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ