ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಇವರ ಸಹಯೋಗದಲ್ಲಿ ಜೂನ್, 22 ರಂದು ಇಂದು ಬೆಳಗ್ಗೆ 10.30 ಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಕುಶಾಲನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ, ದಿಯಾ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ರಾಣಿ ಮದ್ರಾಸ್-ಮೈಸೂರು, ಜಸ್ಟ್ ಡಯಲ್-ಬೆಂಗಳೂರು, ಈಕ್ವಲೈಜರ್ ಆರ್ಎಂಸಿ-ಮೈಸೂರು, ಪ್ಯಾಲೆಸ್ ಟೊಯೋಟಾ ಕುಶಾಲನಗರ, ಅಲ್ಫಾ ಟೆಕ್ನಾಲಜಿ-ಮಡಿಕೇರಿ, ಪುಜಿಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಎಸ್ಎಲ್ಎನ್ ಕಾಫಿ ಪ್ರೈವೇಟ್ ಲಿಮಿಟೆಡ್ ಕೂಡಿಗೆ, ಮ್ಯಾಜಿಕ್ ಬಸ್ ಇಂಡಿಯಾ ಬೆಂಗಳೂರು, ಪರ್ಪಲ್ ಪಾಲ್ಮ್ ರೆಸಾರ್ಟ್ ಮತ್ತು ಸ್ಪಾ-ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ ಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ,ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವುದು.ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ. 08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.
ಜೂನ್ 23 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ
ಕಲಬುರಗಿ : ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜೂನ್ 23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಎಮ್.ಪಿ. ಗಾರ್ಡಿಂಗ್ ಸೊಲ್ಯೂಷನ್ ಪ್ರೈ.ಲೀ. ದಲ್ಲಿ ಟೆಕ್ನಿಷಿಯನ್ ಹುದ್ದೆಗೆ ಐಟಿಐ / ಡಿಪ್ಲೋಮಾ (ಇ ಆಂಡ್ ಇ, ಇ ಆಂಡ್ ಸಿ) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ವಾಲ್ವಾಯ್ಲ್ ಫ್ಲೂಯ್ಡ್ ಪವರ್ಇಂಡಿಯಾ ಪ್ರೈ.ಲಿ. ದಲ್ಲಿ ಟ್ರೈನಿ ಹುದ್ದೆಗೆ ಐಟಿಐ / ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ನೀಡ್ಸ್ ಮ್ಯಾನ್ ಪವರ್ ಸಪೋರ್ಟ್ ಸರ್ವಿಸಸ್ ಪ್ರೈ.ಲಿ.ದಲ್ಲಿ ಟೆಕ್ನಿಷಿಯನ್ ಹುದ್ದೆಗೆ ಐಟಿಐ / ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್(ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲ್ಲಿ ಭಾಗವಹಿಸಬಹುದಾಗಿದೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, 9620095270 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.