HomeKarnatakaBIG NEWS: ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ; ದ್ವೇಷದ ರಾಜಕಾರಣ ಬಿಡಿ ಎಂದಿದ್ದೇನೆ ಎಂದ ಸಿಎಂ...

BIG NEWS: ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ; ದ್ವೇಷದ ರಾಜಕಾರಣ ಬಿಡಿ ಎಂದಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿಯೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲು ಎಫ್ ಸಿಐ ಅಕ್ಕಿ ಕೊಡುವುದಾಗಿ ಹೇಳಿತ್ತು. ನಂತರ ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗಲ್ಲ ಎಂದು ಹೇಳಿದೆ. ಇದೆಲ್ಲ ನೋಡಿದರೆ ರಾಜಕೀಯ ಮಾಡುತ್ತಿದ್ದಾರೆ ಎನಿಸುತ್ತಿದೆ. ತಕ್ಷಣ ಅಕ್ಕಿ ಪೂರೈಕೆ ಮಡುವಂತೆ ಮನವಿ ಮಾಡಿದ್ದೇನೆ. ಅಮಿತ್ ಶಾ ಅವರಿಗೆ ಎಲ್ಲವನ್ನೂ ವಿವವರಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದ್ವೇಷದ ರಾಜಕೀಯ ಮಾಡುವುದು ಬೇಡ. ಬಡವರ ಊಟಕ್ಕಾಗಿ ಅಕ್ಕಿ ವಿತರಣೆ ಮಾಡಬೇಕು ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular