ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಗೀತಾ ಶಿವರಾಜ್ ಕುಮಾರ್ ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಎಂಬ ಬಗ್ಗೆ ಚರ್ಚೆಯಾಗ್ತಿದೆ.
ಬುಧವಾರ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಗೀತಾ ಶಿವರಾಜ್ ಕುಮಾರ್ ಮುಂದಿನ ವರ್ಷ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗ್ತಾರಾ ಎಂಬ ಊಹಾಪೋಹಗಳು ಎದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸಹೋದರಿ ಗೀತಾ ಈ ಬಗ್ಗೆ ಯಾವುದನ್ನೂ ಇನ್ನೂ ನಿರ್ಧರಿಸಿಲ್ಲ. ಪಕ್ಷ, ನನ್ನ ಸಹೋದರ ಮತ್ತು ನನ್ನ ಪತಿಯೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಸಾಂದರ್ಭಿಕ ಭೇಟಿಯ ಭಾಗವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇವಷ್ಟೇ. ಚುನಾವಣೆಯಲ್ಲಿ ಗೆದ್ದ ನಂತರ ನಾವು ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಇದು ಕೇವಲ ಸಾಂದರ್ಭಿಕ ಭೇಟಿ ಎಂದು ಗೀತಾ ಹೇಳಿದರು.
ಮತ್ತೊಂದೆಡೆ ಬಿಜೆಪಿಯ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರು ಕುಮಾರ್ ಬಂಗಾರಪ್ಪ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಅವರು ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗಬಹುದು ಎಂದು ತಿಳಿದುಬಂದಿದೆ.
ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಹಿಂದೆ ಅವರು ಜೆಡಿಎಸ್ನಲ್ಲಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಚೊಚ್ಚಲ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ವಿರುದ್ಧ ಸೋತರು.