ಬೀದರ್ : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಕೈಗಾರಿಕೋದ್ಯಮಗಳಿಗೆ ಬರೆ ಎಳೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಬೀದರ್ ನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಸಿಎಂ ಸಿದ್ದರಾಮಯ್ಯ 10 ಕೆಜಿ ಉಚಿತ ಅಕ್ಕಿ ಕೊಡುವುದಾಗಿ ಹೇಳಿ ಈಗ ನೆಪ ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಬಡವರಿಗೆ 5 ಕೆಜಿ ಅಕ್ಕಿ ಕೊಡುವ ಕೆಲಸ ಮಾಡಿತ್ತು. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುತ್ತಿದೆ. ಸಿದ್ದರಾಮಯ್ಯ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿ, ಈಗ ಕೊಡಲಾಗದೇ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಹಿಂದೂ ಕಾರ್ಯಕರ್ತರು, ರಾಷ್ಟ್ರ ಚಿಂತಕರ ಮೇಲೆ ಕೇಸ್ ಹಾಕುತ್ತಿದ್ದಾರೆ. ಪಾಕಿಸ್ತಾನದ ಪರ ಘೋಷಣೆ ಕೂಗಿದವರ ಮೇಲೆ ಏಕೆ ಕೇಸ್ ಹಾಕಿಲ್ಲ? ಎಂದು ಪ್ರಶ್ನಿಸಿದರು.