HomeKarnatakaBIG NEWS: ಜನವರಿ ವೇಳೆಗೆ ಸಿಗಂದೂರು ಸೇತುವೆ ಲೋಕಾರ್ಪಣೆ

BIG NEWS: ಜನವರಿ ವೇಳೆಗೆ ಸಿಗಂದೂರು ಸೇತುವೆ ಲೋಕಾರ್ಪಣೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ಕಟ್ಟುತ್ತಿರುವ ಸಿಗಂದೂರು ಸೇತುವೆ ಮುಂದಿನ ವರ್ಷದ ಜನವರಿ ವೇಳೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಗುರುವಾರದಂದು ಸಾಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೇತುವೆ 2024ರ ಜುಲೈ ವೇಳೆಗೆ ಪೂರ್ಣಗೊಳ್ಳಬೇಕಿತ್ತಾದರೂ ಗುತ್ತಿಗೆದಾರರೊಂದಿಗೆ ಚರ್ಚೆ ನಡೆಸಿದ ಬಳಿಕ ಜನವರಿ ಅಥವಾ ಫೆಬ್ರವರಿ ವೇಳೆಗೆ ಕಾಮಗಾರಿ ಪೂರ್ಣಗೊಳಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಇನ್ನು ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಪ್ರತಿನಿತ್ಯ ಸುಳ್ಳು ಹೇಳಿಕೊಂಡು ದಿನ ದೂಡುತ್ತಿದ್ದಾರೆ. ಅಕ್ಕಿ ವಿಚಾರದಲ್ಲಿ ವಿನಾಕಾರಣ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular