
ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಮಾಸಣಗಿ ಗ್ರಾಮದ 36 ವರ್ಷದ ಮಂಜು ರುದ್ರಪ್ಪ ನಾಗನೂರ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಹಲವು ವರ್ಷಗಳಿಂದ ಹೆಣ್ಣು ಹುಡುಕುತ್ತಿದ್ದರೂ ಸಹ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ.
ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಮಂಜು ರುದ್ರಪ್ಪ, ಕ್ರಿಮಿ ನಾಶಕ ಸೇವಿಸಿ ಸಾವಿಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡಗಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

