HomeKarnatakaBIG NEWS: ಇಷ್ಟುದಿನ ಆಗದ ಸಮಸ್ಯೆ ಈಗ್ಯಾಕೆ ಆಗುತ್ತಿದೆ....? ಸರ್ಕಾರ ನಡೆಸಲು ಕಾಂಗ್ರೆಸ್ ವಿಫಲವಾಗಿದೆ; ಬಿಜೆಪಿ...

BIG NEWS: ಇಷ್ಟುದಿನ ಆಗದ ಸಮಸ್ಯೆ ಈಗ್ಯಾಕೆ ಆಗುತ್ತಿದೆ….? ಸರ್ಕಾರ ನಡೆಸಲು ಕಾಂಗ್ರೆಸ್ ವಿಫಲವಾಗಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಕಲಬುರ್ಗಿ: ಅಕ್ಕಿ ವಿಚಾರವಾಗಿ ರಾಜಕೀಯ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿಯಾಗಿಲ್ಲ, ಹಿಂದೆಯೂ ಆಗಿದ್ದರು. ಈ ಹಿಂದೆ ಆಗದಿದ್ದ ಸಮಸ್ಯೆ ಈಗ್ಯಾಕೆ ಆಗುತ್ತಿದೆ? ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಾಗ ಸಿದ್ದರಾಮಯ್ಯ ತಮ್ಮ ಫೋಟೋ ಹಾಕಿಕೊಂಡರು. ಸಿದ್ದರಾಮಯ್ಯ ಕೇಂದ್ರದ್ದೂ ಸೇರಿಸಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ. ಹಾಗಾಗಿ ತಲಾ 10 ಕೆಜಿ ಅಕ್ಕಿ ಕೊಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ ಎಂದರು.

ನಿನ್ನೆ ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬಂದಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ಯಾರು? ಭಾಗ್ಯಗಳನ್ನು ನೀಡಲು ಆಗದೇ ಅವರೇ ಸಮಸ್ಯೆಗೆ ಸಿಲುಕಿದ್ದಾರೆ. ಸರ್ಕಾರ ನಡೆಸಲು ಕಾಂಗ್ರೆಸ್ ವಿಫಲವಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular