HomeKarnatakaBIG NEWS: ವಿಧಾನಸಭೆ ಕೆಟ್ಟ ಕನಸು ಎಂದು ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ ಎಂದ ಕೆ.ಎಸ್....

BIG NEWS: ವಿಧಾನಸಭೆ ಕೆಟ್ಟ ಕನಸು ಎಂದು ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ ಎಂದ ಕೆ.ಎಸ್. ಈಶ್ವರಪ್ಪ

ಕೊಪ್ಪಳ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸಭಾ ಚುನಾವಣೆ ಕೆಟ್ಟ ಕನಸು ಎಂದು ಭಾವಿಸಿ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇವೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಅಣಿಯಾಗುತ್ತಿದ್ದೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

7 ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿಯೂ ಪಕ್ಷದ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಹಿಂದಿನ ತಪ್ಪನ್ನು ನಾವೇ ಸರಿಪಡಿಸಬೇಕು. ಅದೊಂದು ಕೆಟ್ಟ ಕನಸು ಪದೇ ಪದೇ ಯಾಕೆ ನೆನಪಿಸಿಕೊಳ್ಳಬೇಕು? ಲೋಕಸಭೆ ಟಿಕೆಟ್ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular