HomeKarnatakaBIG NEWS: ಮೋದಿ ಹೆಸರು ಹೇಳಿಕೊಂಡೇ ಗೆದ್ದವರು, ಮೊದಲು ನಿಮ್ಮ ಸಾಧನೆಯೇನು ಹೇಳಿ.....? ಸಂಸದ ಪ್ರತಾಪ್...

BIG NEWS: ಮೋದಿ ಹೆಸರು ಹೇಳಿಕೊಂಡೇ ಗೆದ್ದವರು, ಮೊದಲು ನಿಮ್ಮ ಸಾಧನೆಯೇನು ಹೇಳಿ…..? ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಸೋಲಿನ ಭೀತಿಯಿಂದ ಸಂಸದ ಪ್ರತಾಪ್ ಸಿಂಹ ಏನೇನೋ ಮಾತನಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ. ಪಾಟೀಲ್ ಬಗ್ಗೆ ವೈಯಕ್ತಿಕ ಹೇಳಿಕೆ ಕೊಡುತ್ತಿದ್ದಾರೆ. ವಿಷಾಯಾಧಾರಿತ ಬಿಟ್ಟು ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹ ಅವರೇ, ನೀವು ಪತ್ರಕರ್ತರಾಗಿದ್ದಾಗ ಸ್ವಲ್ಪ ಓದುತ್ತಿದ್ರಿ. ಸಂಸದರಾದ ಮೇಲೆ ಓದೋದು ಬಿಟ್ಟಿದ್ದೀರಿ. ನಿಮಗೆ ತಾಕತ್ ಇದ್ದರೆ ಎಫ್ ಸಿಐ  ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ. ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಆಗುತ್ತೇನ್ರೀ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರ ಹೆಸರು ಹೇಳಿಕೊಂಡೇ ಗೆದ್ದಿದ್ದೀರಿ. ನಿಮ್ಮ ಸಾಧನೆಯೇನು ಹೇಳಿ ? ನೀವು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಿದ್ದೀರಿ ? ಮೊದಲು ನಿಮ್ಮ ಸಾಧನೆ ಬಗ್ಗೆ ಹೇಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular