ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ನಾಯಕರಲ್ಲಿ ಪೈಪೋಟಿ ಆರಂಭವಾಗಿದ್ದು, ಪ್ರಮುಖವಾಗಿ ಮಾಜಿ ಸಚಿವ ವಿ. ಸೋಮಣ್ಣ ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರಿಗೆ ವಿ.ಸೋಮಣ್ಣ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ವಿ.ಸೋಮಣ್ಣ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯೂ ಹೌದು. ಈ ನಿಟ್ಟಿನಲ್ಲಿ ಹೈಕಮಾಂಡ್ ಗೆ ಪತ್ರ ಬರೆದು ಮನವಿ ಮಾಡಿದ್ದೂ ನಿಜ ಎಂದು ಹೇಳಿದ್ದಾರೆ.
ಕಷ್ಟದ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಸ್ಥಾನ ನನಗೆ ಕೊಡಿ ಎಂದು ವರಿಷ್ಠರಿಗೆ ಕೇಳಿದ್ದೇನೆ. ನನಗೆ ಯಾಕೆ ಕೊಡಬಾರದು ? 100 ದಿನಗಳ ಕಾಲ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ರಾಜ್ಯದ ಯಾವ ನಾಯಕರೊಂದಿಗೂ ಮಾತನಾಡಿಲ್ಲ. ಇವರ ಕೈಲಿ ಆಗದ್ದನ್ನು ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಚುನಾವಣೆಯಲ್ಲಿ ಸೋತಿರಬಹುದು. ಆದರೆ ನನಗೆ ಕೊಟ್ಟ ಟಾಸ್ಕ್ ನಲ್ಲಿ ಸೋತಿಲ್ಲ ಎಂದು ಹೇಳಿದ್ದಾರೆ.