ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು, ಅಧಿಕಾರಿಗಳು ಸುಧೀರ್ಘ ಚರ್ಚೆ ನಡೆಸಿದ್ದಾರೆ.
ಸಭೆಯ ಬಳಿಕ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ.
ಯೋಜನೆಯ ಅರ್ಜಿ ಸ್ವೀಕಾರಕ್ಕೆ ಆ್ಯಪ್ ತಯಾರಿಸಲಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಯವರಿಗೆ ಆ್ಯಪ್ ಬಗ್ಗೆ ಮಾಹಿತಿ ನೀಡಿ. ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸುವ ಬಗ್ಗೆ ಚರ್ಚಿಸಿ ಘೋಷಣೆ ಮಾಡಲಾಗುವುದು. ಆಗಸ್ಟ್ 17 ಅಥವಾ 18ರಂದು ಗೃಹಲಕ್ಷ್ಮಿ ಯೋಜನೆ ಜಾರಿಗೆ ಚರ್ಚೆ ನಡೆದಿದೆ. ಇಂದು ಸಂಜೆ 4 ಗಂಟೆವರೆಗೆ 6.44 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ಇಲ್ಲ ಹೇಳಿದ್ದಾರೆ