ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮತದಾರರಿಗೆ 5 ‘ಗ್ಯಾರಂಟಿ’ ಯೋಜನೆಗಳನ್ನು ಘೋಷಣೆಗಳನ್ನು ಮಾಡಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಳ್ಳುತ್ತಿದೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಕೊಡುವ ‘ಶಕ್ತಿ’ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು, ಪ್ರತಿನಿತ್ಯ ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
ಇದೀಗ ಮತ್ತೊಂದು ಪ್ರಮುಖ ಯೋಜನೆ ‘ಗೃಹಲಕ್ಷ್ಮಿ’ ಅನುಷ್ಠಾನಕ್ಕೆ ಸಿದ್ಧತೆಗಳ ನಡೆಯುತ್ತಿದ್ದು, ಇದು ಆಗಸ್ಟ್ ತಿಂಗಳಿನಿಂದ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಗೃಹಲಕ್ಷ್ಮಿ’ ಯೋಜನೆ ಜಾರಿಗೆ ಈಗಾಗಲೇ ಪ್ರತ್ಯೇಕ ಆಪ್ ತಯಾರಾಗಿದೆ. ಯಾವ ದಿನಾಂಕದಿಂದ ಅರ್ಜಿ ಸ್ವೀಕಾರ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಬಳಿಕ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.