HomeKarnatakaBIG NEWS: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನ್ ರೆಡಿ ಎಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್

BIG NEWS: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನ್ ರೆಡಿ ಎಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ. ಮೊದಲು ಅಕ್ಕಿ ಕೊಡುತ್ತೇವೆ ಎಂದು ಈಗ ಅಕ್ಕಿ ಕೊಡಲ್ಲ ಎಂದು ಹೇಳುತ್ತಿರುವುದು ರಾಜಕೀಯ ದುರುದ್ದೇಶ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಇಂದು ಕಾಂಗ್ರೆಸ್ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ. ಎಂ ಎಲ್ ಸಿ ಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಲೋಕಸಭಾ ಚುನಾವಣೆಯಲ್ಲಿಯೂ ನಾನು ಜವಾಬ್ದಾರಿ ವಹಿಸಿಕೊಳ್ಳುತ್ತೇನೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸು ಎಂದರೆ ನಾನು ರೆಡಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬಹಳ ಶ್ರಮ ಹಾಕಿ ನಾನು ಪಕ್ಷ ಸಂಘಟನೆ ಮಾಡಿದ್ದೆ. ಆದರೆ ಬಿಜೆಪಿಯವರು ನನಗೆ ಮನ್ನಣೆ ಕೊಡಲಿಲ್ಲ. ಒಂದು ರಾಷ್ಟ್ರೀಯ ಪಕ್ಷ ಹೇಗಿರಬೇಕು ಎಂಬುದನ್ನು ಕಾಂಗ್ರೆಸ್ ನೋಡಿ ಕಲಿಯಲಿ. ಬಿಜೆಪಿಯವರು ಪೆಟ್ಟು ತಿಂದರೂ ಬದಲಾಗಲ್ಲ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular