HomeKarnatakaBIG NEWS: ಷಡ್ಯಂತ್ರದಿಂದ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ...

BIG NEWS: ಷಡ್ಯಂತ್ರದಿಂದ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಬಿಜೆಪಿ 25-26 ಲೋಕಸಭಾ ಸ್ಥಾನ ಗೆಲ್ಲುವ ಮೂಲಕ ಪ್ರಧಾನಿ ಮೋದಿಯವರಿಗೆ ಕೊಡುಗೆ ಕೊಡಬೇಕಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಷಡ್ಯಂತ್ರದ ಮೂಲಕ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ. 25-26 ಲೋಕಸಭಾ ಸ್ಥಾನ ಗೆದ್ದು ಕೊಡುಗೆ ಕೊಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಕಾಂಗ್ರೆಸ್ ಸರ್ಕಾರ ಹತ್ತಲ್ಲ, 15 ಕೆಜಿ ಅಕ್ಕಿ ಕೊಡಬೇಕು. ನಿರುದ್ಯೋಗಿ ಪದವೀಧರರಿಗೆ 3000 ಹಣ ಕೊಡಬೇಕು ಎಂದು ಒತ್ತಾಯಿಸಿದರು.

ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಲು ಅವಕಾಶ ಕೊಡದಂತೆ ನಾವು ಕೆಲಸ ಮಾಡಬೇಕು. ಅಧಿವೇಶನದ ಆರಂಭದ ದಿನದಿಂದಲೇ ನಾನು ಸತ್ಯಾಗ್ರಹ ಮಾಡುತ್ತೇನೆ. ವಿಧಾನಸಭೆಯಲ್ಲಿ ನಮ್ಮ ಪಕ್ಷದ ಶಾಸಕರು ಹೋರಾಟ ಮಾಡಲಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular