ಬೆಂಗಳೂರು : ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ನೀಡಲು ನಾವು ಬದ್ದರಾಗಿದ್ದೇವೆ, ರಾಜ್ಯಕ್ಕೆ 2 ಲಕ್ಷದ 29 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕು. ರಾಜ್ಯಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. . ಛತ್ತೀಸಗಢ ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆ (Anna Bhagya Scheme) ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಿಗದಿಯಾಗಿದೆ.ಮಧ್ಯಾಹ್ನ 3:30 ಕ್ಕೆ ನಡೆಯುವ ಸಭೆಯಲ್ಲಿ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ, ಸಿಎಸ್ ವಂದಿತಾ ಶರ್ಮಾ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕೇಂದ್ರ ಸರ್ಕಾರದಿಂದ ಅಕ್ಕಿ ನಿರಾಕರಣೆ ಹಿನ್ನೆಲೆ ಪರ್ಯಾಯ ವ್ಯವಸ್ಯೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಬೇರೆ ಯಾವ ರಾಜ್ಯದಿಂದ ಎಷ್ಟು ಪ್ರಮಾಣದ ಅಕ್ಕಿ ಸಿಗಲಿದೆ..? ಹಾಗೂ ಅಕ್ಕಿ ದರದ ಬಗ್ಗೆ ಕೂಡ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಅಕ್ಕಿ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ.