‘ವಾಸ್ತುದೋಷ’ದ ಕಾರಣಕ್ಕೆ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ಬಾಗಿಲಿಗೆ ಮುಕ್ತಿ; ದ್ವಾರ ತೆರೆಸಿ ಕಚೇರಿ ಪ್ರವೇಶ ಮಾಡಿದ ಸಿಎಂ

ವಾಸ್ತು ದೋಷವಿದೆ ಎಂಬ ಕಾರಣಕ್ಕೆ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ.

ಈ ದ್ವಾರದ ಬಾಗಿಲು ತೆರೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದರ ಮೂಲಕವೇ ತಮ್ಮ ಕಛೇರಿ ಪ್ರವೇಶ ಮಾಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ  ಪೋಸ್ಟ್‌ ಹಾಕಲಾಗಿದ್ದು, “ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ.

ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ. ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read