HomeCrimeಅನೈತಿಕ ಚಟುವಟಿಕೆ ನಡೆಸುತ್ತಿದ್ದ 'ಸ್ಪಾ' ಮೇಲೆ ಪೊಲೀಸ್ ರೈಡ್...!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ತಮಗೆ ಬಂದ ಮಾಹಿತಿಯನ್ನು ಆಧರಿಸಿ ವಿನೋಬ ನಗರ ಪೊಲೀಸ್ ಚೌಕಿ ಬಳಿ ಇರುವ ಫ್ಯಾಮಿಲಿ ಸೆಲೂನ್ ಮೇಲೆ ಶನಿವಾರ ಸಂಜೆ ಪೊಲೀಸರು ದಾಳಿ ನಡೆಸಿದ್ದರು.

ಪ್ರೊಬೇಷನರಿ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ವಿನೋಬ ನಗರ ಠಾಣೆ ಪೊಲೀಸರು ಈ ದಾಳಿ ನಡೆಸಿದ್ದು, ರಕ್ಷಿಸಲಾದ ಏಳು ಯುವತಿಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular