ಬೆಂಗಳೂರು: ಕುಡಿತದ ವೇಳೆ ಸ್ನೇಹಿತರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತರೇ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.
ಬೆಂಗಳೂರಿನ ಕಸವನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ಈ ಘಟನೆ ನಡೆದಿದ್ದು, 20 ವರ್ಷದ ಡೇವಿಡ್ ಕೊಲೆಯಾದ ಯುವಕ.
ಸ್ನೇಹಿತರೊಂದಿಗೆ ಬಾರ್ ನಲ್ಲಿ ಪಾರ್ಟಿ ಮಾಡುತ್ತಿದ್ದ ಯುವಕ ಡೇವಿಡ್ ಹಾಗೂ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ಡೇವಿಡ್ ಮೇಲೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಸ್ನೇಹಿತರು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಡೇವಿಡ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.