HomeKarnatakaಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣ

ಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣ

ಹಾಸನ: ಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಸಕಲೇಶಪುರ ತಾಲೂಕಿನ ದೋಣಿಗಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಶಿರಾಡಿ ಘಾಟ್ ನಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸುರಂಗ ಮಾರ್ಗ ನಿರ್ಮಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

30 ಕಿಲೋಮೀಟರ್ ಉದ್ದದ ಹೊಸ ಯೋಜನೆ ಸಿದ್ಧಪಡಿಸಲಾಗಿದ್ದು, ಇದರಲ್ಲಿ 3.8 ಕಿಲೋಮೀಟರ್ ಸುರಂಗ ಮಾರ್ಗ ಇರಲಿದೆ. 10 ಕಿ.ಮೀ ಅರಣ್ಯ ವ್ಯಾಪ್ತಿಯಲ್ಲಿದ್ದು, ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಆನೆ ಕಾರಿಡಾರ್ ಸೇರಿದಂತೆ ಪ್ರಾಣಿಗಳ ಓಡಾಟಕ್ಕೆ ಧಕ್ಕೆಯಾಗದಂತೆ ಯೋಜನೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular