
ಬೆಂಗಳೂರಿನ ತಲಘಟ್ಟಪುರ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದ್ದು, ಅಪಾರ್ಟ್ ಮೆಂಟ್ ನ 13 ನೇ ಮಹಡಿಯಲ್ಲಿರುವ ಫ್ಲ್ಯಾಟ್ ಗೆ ಫುಡ್ ಡೆಲಿವರಿ ನೀಡಲು ಹೋದ ಯುವಕ ಒಂಟಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಚೇತನ್ ಎಂಬ ಫುಡ್ ಡೆಲಿವರಿ ಬಾಯ್ 13 ನೇ ಮಹಡಿಗೆ ಲಿಫ್ಟ್ ನಲ್ಲಿ ಹೋಗುತ್ತಿದ್ದಾಗ ಅಲ್ಲಿ 10 ವರ್ಷದ ಬಾಲಕಿಯೂ ಇದ್ದಳು. ಆಗ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ಎಲ್ಲರೂ ಸೇರಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಲಿಫ್ಟ್ ಲ್ಲಿ ಹಾಕಲಾಗಿದ್ದ ಸಿಸಿಟಿವಿಯಲ್ಲಿ ಕಾಮುಕನ ಕರಾಳ ಕೃತ್ಯ ಬಯಲಾಗಿದೆ. ಸದ್ಯ ಆರೋಪಿ ಚೇತನ್ ನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಿಕ್ಕ ಮಕ್ಕಳನ್ನು ಒಬ್ಬಂಟಿಯಾಗಿ ಬಿಡುವ ಪೋಷಕರು ಎಚ್ಚರ ವಹಿಸಬೇಕು.

