BIG NEWS: ಭೀಕರ ಅಪಘಾತ; ಕಾಲನ್ನೇ ಕಳೆದುಕೊಂಡ್ರಾ ಯುವನಟ ಸೂರಜ್ ?

ಬೆಂಗಳೂರು: ಭೀಕರ ಅಪಘಾತದಲ್ಲಿ ನಟ ಸೂರಜ್ ಗಂಭೀರವಾಗಿ ಗಾಯಗೊಂಡಿದ್ದು, ಕಾಲನ್ನೇ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪಾರ್ವತಮ್ಮ ರಾಜ್ ಕುಮಾರ್ ಅವರ ತಮ್ಮನ ಮಗನಾಗಿರುವ ಸೂರಜ್, ಉದಯೋನ್ಮುಖ ನಟನಾಗಿದ್ದು, ಎರಡು ಸಿನಿಮಾ ಕೂಡ ಅನೌನ್ಸ್ ಆಗಿತ್ತು. ಅಷ್ಟರಲ್ಲಿ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಕಾಲನ್ನೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಊಟಿಗೆ ತೆರಳುತ್ತಿದ್ದ ವೇಳೆ ಮೈಸೂರು-ನಂಜನಗೂಡು ರಸ್ತೆಯಲ್ಲಿ ಜೂನ್ 24ರಂದು ಸಂಜೆ ಅಪಘಾತದಲ್ಲಿ ಸೂರಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಬಲಗಾಲಿಗೆ ತೀವ್ರವಾದ ಪೆಟ್ಟಾಗಿದ್ದು, ಕಾಲನ್ನು ತೆಗೆಯಲಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಸೂರಜ್ ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಭಗವಾನ್ ಶ್ರೀಕೃಷ್ಣ ಪರಮಾತ್ಮ ಸೇರಿದಂತೆ ಎರಡು ಸಿನಿಮಾಗಳನ್ನು ಮಾಡಲು ಸೂರಜ್ ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ಈ ದುರಂತ ಸಂಭವಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read