HomeKarnatakaBIG NEWS: KSRTC ಮುಚ್ಚುವ ಸ್ಥಿತಿ ಇದೆ; ಕರ್ನಾಟಕ ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ಬಂದಿದೆ; ಮಾಜಿ...

BIG NEWS: KSRTC ಮುಚ್ಚುವ ಸ್ಥಿತಿ ಇದೆ; ಕರ್ನಾಟಕ ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಈಗ ಕಂಡಿಷನ್ ಹಾಕುತ್ತಿದ್ದಾರೆ. ಸರ್ಕಾರ ಒಂದೇ ತಿಂಗಳಲ್ಲಿ ಜನಪ್ರಿಯತೆ ಕಳೆದುಕೊಂಡಿದೆ ಎಂದು ಕಿಡಿಕಾರಿದರು.

ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಮಳೆ ಇಲ್ಲ, ಜಲಾಶಯಗಳಲ್ಲಿ ನೀರು ಇಲ್ಲ ಈ ಬಗ್ಗೆ ಇವರಿಗೆ ಯಾವ ಚಿಂತೆಯೂ ಇಲ್ಲ, ಕೇಂದ್ರ ಅಕ್ಕಿ ಕೊಟ್ಟಿಲ್ಲ ಎಂದು ಪ್ರತಿಭಟನೆ ಮಾಡಿದ್ದಾರೆ ಯಾವ ನೈತಿಕತೆ ಇವರಿಗಿದೆ ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕಿಡಿಕಾರಿದ ಬೊಮ್ಮಾಯಿ, ಕೆ.ಎಸ್.ಆರ್.ಟಿ.ಸಿ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಡೀಸೆಲ್ ಇಲ್ಲದೇ ಬಸ್ ಗಳು ನಿಲ್ಲುವ ಪರಿಸ್ಥಿತಿ ಇದೆ. ಇನ್ನು ಇಡೀ ಕರ್ನಾಟಕ ಕತ್ತಲಲ್ಲಿ ಮುಳುಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕರ ನಿಜ ಬಣ್ಣ ಬಯಲಾಗಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular