HomeKarnatakaBIG NEWS: ಯತ್ನಾಳ್ ಗೆ ವೇದಿಕೆಯಲ್ಲೇ ಬುದ್ಧಿ ಹೇಳಿದ ಮಾಜಿ ಸಿಎಂ ಬೊಮ್ಮಾಯಿ

BIG NEWS: ಯತ್ನಾಳ್ ಗೆ ವೇದಿಕೆಯಲ್ಲೇ ಬುದ್ಧಿ ಹೇಳಿದ ಮಾಜಿ ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜಕಾರಣದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ, ಮಾಡಿಕೊಳ್ಳುವುದೂ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಸಿಎಂ ಮಾಡಲು ನಾವ್ಯಾಕೆ ಓಡಾಡಬೇಕು ? ಬಿ ಎಸ್ ವೈ ಹಾಗೂ ಬೊಮ್ಮಾಯಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ ವಿಚಾರವಾಗಿ ಪರೋಕ್ಷವಾಗಿ ಹೊಂದಾಣಿಕೆ ರಾಜಕಾರಣ ಎಂದು ಟಾಂಗ್ ನೀಡಿದ್ದ ಯತ್ನಾಳ್ ಹೇಳಿಕೆಗೆ ವೇದಿಕೆಯಲ್ಲೇ ತಿರುಗೇಟು ನೀಡಿದ ಬೊಮ್ಮಾಯಿ, ಸೌಹಾರ್ದಯುತವಾಗಿ ಮನೆಗೆ ಬರುವವರನ್ನು ಬೇಡ ಎನ್ನಲು ಆಗುವುದಿಲ್ಲ, ಅದು ಕರ್ನಾಟಕದ ಸಂಸ್ಕೃತಿಯೂ ಅಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಗೆ ಹೋಗದೇ ಕೆಲವರು ರಾಜಿ ಮಾಡಿಕೊಂಡಿದ್ದಾರೆ. ಬಿಜೆಪಿ ತಾಯಿ ಸಮಾನ, ಕಾರ್ಯಕರ್ತರು ಅಣ್ಣತಮ್ಮಂದಿರ ಸಮಾನ. ಬಿಜೆಪಿ ಕಾರ್ಯಕರ್ತರಿಗೆ ದ್ರೋಹ ಮಾಡುವ ಕೆಲಸವನ್ನು ಮಾಡಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular