ಧಾರವಾಡ: ಸಮಾಜದಲ್ಲಿ ಸಾಮರಸ್ಯ ಕದಡದಂತೆ ಕಾನೂನಿನಲ್ಲಿ ಅಗತ್ಯ ಬದಲಾವಣೆ ಮತ್ತು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ,
ನವನಗರದ ರಾಜ್ಯ ಕಾನೂನು ವಿವಿಯಲ್ಲಿ ಭಾನುವಾರ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಿ ವ್ಯಾಜ್ಯಗಳನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಣೆ ಮಾಡುವ ಅಗತ್ಯವಿದ್ದು, ಈ ಉದ್ದೇಶದಿಂದ ಸರ್ಕಾರಿ ವ್ಯಾಜ್ಯಗಳ ನಿರ್ವಹಣಾ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಹೆಸರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಲಾಗುತ್ತಿದೆ. ಅವುಗಳನ್ನು ಹಿಂಪಡೆದು ಸಂವಿಧಾನದ ಆಶಯದಂತೆ ಬದಲಾವಣೆ ತರಲು ಉದ್ದೇಶಿಸಲಾಗಿದೆ. ಜುಲೈ 3 ರಿಂದ ಆರಂಭವಾಗುವ ಅಧಿವೇಶನದಲ್ಲಿ ಅನೇಕ ಕಾನೂನುಗಳು, ಮಂಡನೆಯಾಗಲಿವೆ. ಗೋ ಹತ್ಯೆ ನಿಷೇಧ ಕಾನೂನು ವಾಪಸ್ ಬಗ್ಗೆ ಪ್ರಸ್ತಾಪವಿಲ್ಲ ಎಂದು ಮಾಹಿತಿ ನೀಡಿದ್ದಾರೆ.