ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023 -24 ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.
ಪ್ರತಿಭಾ ಕಾರಂಜಿ ಮೂಲಕ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲಾಗಿದೆ. ಶಾಲಾ ಹಂತದಲ್ಲಿಯೇ ಹೆಚ್ಚಿನ ಮಕ್ಕಳು ಭಾಗವಹಿಸಲು ಶಿಕ್ಷಕರು ಪ್ರೋತ್ಸಾಹ ನೀಡಬೇಕೆಂದು ತಿಳಿಸಲಾಗಿದೆ.
ವಿಜೇತರ ಆಯ್ಕೆಗೆ ಮಾನದಂಡ ನಿಗದಿಪಡಿಸಲಾಗಿದ್ದು, ಯಾವ ಮಕ್ಕಳಿಗೆ ಯಾವ ಕಾರ್ಯಕ್ರಮ ನಡೆಸಬೇಕೆಂಬುದನ್ನು ವಿವರವಾಗಿ ತಿಳಿಸಲಾಗಿದೆ. ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಸಮಿತಿಯಲ್ಲಿರುವ ಸಂಸದರು, ಉಸ್ತುವಾರಿ ಸಚಿವರು, ಜಿಲ್ಲಾ ಸಚಿವರು, ಬ್ಲಾಕ್ ಸಂಘಟನಾ ಸಮಿತಿಯಲ್ಲಿ ಕ್ಷೇತ್ರದ ಶಾಸಕರು ಅಧ್ಯಕ್ಷರಾಗಿರುತ್ತಾರೆ. ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉತ್ತಮ ಕಾರ್ಯಕ್ರಮವಾಗಿದೆ.