HomeIndiaBREAKING NEWS: 2 ಬಸ್ ಗಳ ಮುಖಾಮುಖಿ ಡಿಕ್ಕಿ; ಒಡಿಶಾದಲ್ಲಿ 10 ಮಂದಿ ಸಾವು

BREAKING NEWS: 2 ಬಸ್ ಗಳ ಮುಖಾಮುಖಿ ಡಿಕ್ಕಿ; ಒಡಿಶಾದಲ್ಲಿ 10 ಮಂದಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ಬಸ್ಸುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 10 ಮಂದಿ ಸಾವನ್ನಪ್ಪಿ 8 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಹಾಗೂ ಖಾಸಗಿ ಬಸ್ಸಿನ ನಡುವೆ ಗಂಜಾಂ ಜಿಲ್ಲೆಯ ದಿಗಪಹಂಡಿ ಸಮೀಪ ಈ ಡಿಕ್ಕಿ ಸಂಭವಿಸಿದ್ದು, ಗಾಯಾಳುಗಳನ್ನು ಎಂಕೆಸಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಚಾಲಕರುಗಳ ಅಜಾಗರೂಕತೆಯೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಈ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular