HomeKarnatakaBIG NEWS: ಮತ್ತೆ ಮಾಜಿ ಸಚಿವ ಡಾ. ಸುಧಾಕರ್ ವಿರುದ್ಧ ಕಿಡಿಕಾರಿದ ಎಂಟಿಬಿ ನಾಗರಾಜ್; ಆತನೂ...

BIG NEWS: ಮತ್ತೆ ಮಾಜಿ ಸಚಿವ ಡಾ. ಸುಧಾಕರ್ ವಿರುದ್ಧ ಕಿಡಿಕಾರಿದ ಎಂಟಿಬಿ ನಾಗರಾಜ್; ಆತನೂ ಸೋತ ನನ್ನನ್ನೂ ಸೋಲಿಸಿದ ಎಂದು ಆಕ್ರೋಶ

ಬೆಂಗಳೂರು: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿಧಾನಸಭಾ ಚುನಾವಣೆ ಸೋಲಿನ ಆಘಾತದಿಂದ ಹೊರಬರಲಾಗದೇ ಮಾಜಿ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಪದೇ ಪದೇ ಆರೋಪಗಳನ್ನು ಮಾಡುತ್ತಲೇ ಇದ್ದಾರೆ. ಮಾಜಿ ಸಚಿವ ಸುಧಾಕರ್ ಅವರೇ ತನ್ನ ಸೋಲಿಗೆ ಕಾರಣ ಎಂದು ಮತ್ತೆ ಕಿಡಿಕಾರಿದ್ದಾರೆ.

ನಾನು ಕಾಂಗ್ರೆಸ್ ನಲ್ಲಿದ್ದಾಗ ಮೂರು ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು ಎರಡು ಬಾರಿ ಸೋತೆ. ಮಾಜಿ ಸಿಎಂ ಯಡಿಯೂರಪ್ಪ ಮಾತಿಗೆ ಗೌರವ ಕೊಟ್ಟು ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ಬಳಿಕ ಎರಡು ಬಾರಿ ಸ್ಪರ್ಧಿಸಿ ಎರಡು ಬಾರಿಯೂ ಸೋತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ ಉಸ್ತುವಾರಿಯನ್ನು ಡಾ.ಕೆ. ಸುಧಾಕರ್ ಗೆ ಕೊಟ್ಟಿದ್ದರು. ಅವರು ಸಮರ್ಥವಾಗಿ ನಿಭಾಯಿಸಲಿಲ್ಲ. ಚುನಾವಣೆಯಲ್ಲಿ ಆತನೂ ಸೋತ. ನಮ್ಮನ್ನೂ ಸೋಲಿಸಿದ. ನನ್ನ ಹಾಗೂ ಚಿಂತಾಮಣಿ ಬಿಜೆಪಿ ಅಭ್ಯರ್ಥಿಯ ಸೋಲಿಗೆ ಸುಧಾಕರ್ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular